ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಹಬ್ಬದ ಸಂಭ್ರಮಕ್ಕೆ ಅಡ್ಡಿಪಡಿಸಿದರೆ ಕಾದಿದೆ ಕಠಿಣ ಕ್ರಮ - ಇನ್ಸ್ಪೆಕ್ಟರ್ ಎಚ್.ಟಿ. ಗಂಗಾಧರ್

ಚಳ್ಳಕೆರೆ: ಯುಗಾದಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ಧ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ನಗರದ ಅಬಕಾರಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಬಕಾರಿ ಇನ್ಸ್ಪೆಕ್ಟರ್ ಎಚ್.ಟಿ. ಗಂಗಾಧರ್, ಎರಡು ಹಬ್ಬಗಳು ಒಂದೇ ಬಾರಿಗೆ ಬಂದಿರುವುದು ಸಂತಸದ ವಿಷಯವಾಗಿದ್ದು, ಎಲ್ಲರೂ ಹಬ್ಬಗಳನ್ನು ಸಡಗರ ಸಂಭ್ರಮದಿಂದ ಆಚರಿಸುವಂತೆ ಜನತೆಗೆ ಶುಭ ಕೋರಿದರು.

ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಎಲ್ಲಿಯಾದರೂ ಅಕ್ರಮ ಮದ್ಯ ಮಾರಾಟ ಕಂಡುಬಂದರೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸಿ ಜನರಿಗೆ ತೊಂದರೆ ನೀಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇನ್ಸ್ಪೆಕ್ಟರ್ ಎಚ್.ಟಿ. ಗಂಗಾಧರ್ ಸ್ಪಷ್ಟ ಎಚ್ಚರಿಕೆ ನೀಡಿದರು.

ಅಕ್ರಮ ಮದ್ಯ ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಅಬಕಾರಿ ಇಲಾಖೆಗೆ ಮಾಹಿತಿ ನೀಡುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

Edited By : PublicNext Desk
Kshetra Samachara

Kshetra Samachara

18/03/2026 08:02 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ