ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

ತುಮಕೂರು : ಅಪಘಾತವಾಗಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಯುವಕನನ್ನು ತುಮಕೂರು ತಹಶೀಲ್ದಾರ್ ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ತುಮಕೂರು ತಹಶೀಲ್ದಾರ್ ರಾಜೇಶ್ವರಿ ಅವರು ಹೆಬ್ಬೂರಿನಿಂದ ತುಮಕೂರಿಗೆ ತಮ್ಮ ಕಾರಿನಲ್ಲಿ ಬರುತ್ತಿದ್ದಾಗ, ರಸ್ತೆಯ ಪಕ್ಕದಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿತ್ತು. ಅಪಘಾತದಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ರಕ್ತಸ್ರಾವದಿಂದ ನರಳುತ್ತಿರುವುದನ್ನು ಅವರು ಗಮನಿಸಿದರು. ಆಗ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಕರೆ ಮಾಡಲು ಪ್ರಯತ್ನಿಸುತ್ತಿದ್ದರು.

ಇದನ್ನು ನೋಡಿದ ತಹಶೀಲ್ದಾರ್ ರಾಜೇಶ್ವರಿ ಅವರು ತಕ್ಷಣವೇ ತಮ್ಮ ಕಾರಿನಿಂದ ಇಳಿದು, ಗಾಯಾಳುವನ್ನು ತಮ್ಮದೇ ಕಾರಿನಲ್ಲಿ ಹತ್ತಿಸಿಕೊಂಡು ತುಮಕೂರಿನ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಯುವಕನ ಆರೋಗ್ಯ ವಿಚಾರಿಸಿದ ಬಳಿಕ ಅವರು ತಮ್ಮ ಕರ್ತವ್ಯಕ್ಕೆ ತೆರಳಿದರು.

ತಹಶೀಲ್ದಾರ್ ಮಾನವೀಯತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Edited By :
PublicNext

PublicNext

18/03/2026 09:54 pm

Cinque Terre

15.7 K

Cinque Terre

0

ಸಂಬಂಧಿತ ಸುದ್ದಿ