ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ KSRTC ಬಸ್ ನಿಲ್ದಾಣ, ಹಾಗೂ ಡಿಪೋಗಳು ನಿರ್ಮಾಣವಾಗಿ ವರ್ಷಗಳೇ ಕಳೆದರೂ ಇನ್ನೂ ಉದ್ಘಾಟನೆಯಾಗದ ಹಿನ್ನೆಲೆ, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದ ಮುಖ್ಯ ರಸ್ತೆಯಲ್ಲೇ ಸುಮಾರು 10 ಕೋಟಿ ವೆಚ್ಚದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶ್ರೀರಾಮುಲು ಸಾರಿಗೆ ಮಂತ್ರಿಗಳಾಗಿದ್ದಾಗ KSRTC ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಆದರೆ ಈಗ ಕಾಮಗಾರಿ ಮುಕ್ತಾಯವಾಗಿ ಎರಡು ವರ್ಷ ಕಳೆದರೂ ಬಸ್ ನಿಲ್ದಾಣ ಉದ್ಘಾಟನೆಯಾಗದ ಹಿನ್ನೆಲೆ, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಹೊರ ವಲಯದಲ್ಲಿ KSRTC ಡಿಪೋ ಕೂಡ ನಿರ್ಮಾಣ ಮಾಡಿದ್ದು, ಇನ್ನೂ ಪ್ರಾರಂಭವಾಗಿಲ್ಲ. ಬಸ್ ವ್ಯವಸ್ಥೆ ಇಲ್ಲ. ಸಾರ್ವಜನಿಕರು ಹೊರವಲಯದ ಬಸ್ ಹಿಡಿಯಲು ಹಾನಗಲ್ ಕ್ರಾಸ್ ಗೆ ಹೋಗಬೇಕಾಗಿದೆ.
ಇನ್ನು ಬಳ್ಳಾರಿಗೆ ಸಾಗುವ ಬಸ್ ಗಳು ಮೊಳಕಾಲ್ಮೂರು ಪಟ್ಟಣದ ಒಳಗೆ ಪ್ರವೇಶ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ತೊಂದರೆ ಅನುಭವಿಸುವಂತಾಗಿದೆ. KSRTC ಬಸ್ ನಿಲ್ದಾಣ ಉದ್ಘಾಟನೆ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ಮಧ್ಯೆ ಕ್ರೆಡಿಟ್ ವಾರ್ ಶುರುವಾಯ್ತಾ ಎನ್ನುವ ಚರ್ಚೆ ಸದ್ಯ ಪ್ರಾರಂಭವಾಗಿವೆ.
PublicNext
18/03/2026 10:06 pm
LOADING...