ಹಿಂದೂಗಳ ಪವಿತ್ರ ಹಬ್ಬವಾದ ಚಂದ್ರಮಾನ ಯುಗಾದಿಯ ಶುಭ ಸಂಭ್ರಮದಲ್ಲಿ, ಪ್ರಕೃತಿಯಲ್ಲಿ ಹೊಸತನ ಮೂಡುವ ಈ ಸಂದರ್ಭದಲ್ಲಿ, ಬೇವು-ಬೆಲ್ಲ ಸೇವಿಸುವ ಮೂಲಕ ಜೀವನದ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ಸಾರಲಾಗುತ್ತದೆ. ಈ ಶುಭ ಸಂದರ್ಭದಲ್ಲಿ, ನಾಡಿಗೆ ಸಕಾಲದಲ್ಲಿ ಮಳೆ-ಬೆಳೆ ಸಮೃದ್ಧಿಯಾಗಿ, ನಾಡಿನ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರದ ಜನತೆಗೆ ಸುಖ, ಶಾಂತಿ ಮತ್ತು ನೆಮ್ಮದಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಈ ಶುಭಾಶಯಗಳನ್ನು ಹುಬ್ಬಳ್ಳಿ ರಾಣಿ ಚನ್ನಮ್ಮ ಮಹಿಳಾ ಮಂಡಳದ ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ಮಹಿಳಾ ಕಾಂಗ್ರೆಸ್‌ನ ಮಾಜಿ ಜಿಲ್ಲಾ ಅಧ್ಯಕ್ಷರು, ಉತ್ತರ ಕರ್ನಾಟಕ ಇಂದಿರಾಗಾಂಧಿ ಅಭಿಮಾನಿಗಳ ವೇದಿಕೆಯ ಅಧ್ಯಕ್ಷರು ಹಾಗೂ ಶ್ರೀ ಗುರುಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ನ ಮಾಜಿ ಚೇರ್ಮನ್ ಆದ ತಾರಾದೇವಿ ವಾಲಿ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/03/2026 08:30 am
LOADING...