ಹುಬ್ಬಳ್ಳಿ:ಬಿಜೆಪಿ ಯುವ ಮುಖಂಡರು ಹಾಗೂ VAK ಫೌಂಡೇಶನ್‌ನ ಸಂಸ್ಥಾಪಕರೂ ಆದ ವೆಂಕಟೇಶ ಅಶೋಕ ಕಾಟವೆ ಅವರು ಸಮಸ್ತ ನಾಡಿನ ಜನತೆಗೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಜನತೆಗೆ 2026ನೇ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಹಿಂದೂಗಳ ಪವಿತ್ರ ಹಬ್ಬವಾದ ಯುಗಾದಿಯ ಈ ಶುಭ ಸಂದರ್ಭದಲ್ಲಿ, ಪ್ರಕೃತಿಯ ಬದಲಾವಣೆಯೊಂದಿಗೆ ಬೇವು-ಬೆಲ್ಲ ಸೇವಿಸುವ ಮೂಲಕ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ, ಅಭಿವೃದ್ಧಿ ಮತ್ತು ಉತ್ತಮ ಆರೋಗ್ಯ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
ಸುಮಾರು ವರ್ಷಗಳಿಂದ ಸಮಾಜ ಸೇವಾ ಕಾರ್ಯಗಳಲ್ಲಿ ನಿರತವಾಗಿರುವ VAK ಫೌಂಡೇಶನ್, ಶಿಕ್ಷಣ ಮತ್ತು ಹಸಿವು ನೀಗಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಿದೆ. ಕನ್ನಡ ಶಾಲಾ ಮಕ್ಕಳಿಗೆ ಪರೀಕ್ಷಾ ಕಿಟ್, ನೋಟ್‌ಬುಕ್ ಹಾಗೂ ಬ್ಯಾಗ್‌ಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದೆ. ಅಷ್ಟೇ ಅಲ್ಲದೆ, ಹಲವಾರು ಬಡ ಕುಟುಂಬಗಳಿಗೆ ದವಸಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಅವರ ಹಸಿವನ್ನು ನೀಗಿಸಿದೆ.
VAK ಫೌಂಡೇಶನ್ ವತಿಯಿಂದಲೂ ಸಮಸ್ತ ನಾಡಿನ ಜನತೆಗೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/03/2026 08:38 am
LOADING...