ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದ ಸಾಂಸ್ಕೃತಿಕ ವೈಭವ ಮರುಕಳಿಸಲಿ : ಚನ್ನಬಸಪ್ಪ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಹಂಪಿ ಮತ್ತು ಕರಾವಳಿ ಉತ್ಸವಗಳ ಮಾದರಿಯಲ್ಲಿ ಸಹ್ಯಾದ್ರಿ ಉತ್ಸವ’ ಅಥವಾ ’ಮಲೆನಾಡು ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಬೇಕು ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಯಾವುದೇ ಸಾಂಸ್ಕೃತಿಕ ಉತ್ಸವಗಳು ನಡೆಯದ ಕಾರಣ ಜಿಲ್ಲೆಯ ಕಲೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಶಾಸಕರು, ಶಿವಮೊಗ್ಗ ಜಿಲ್ಲೆಯು ರಾಷ್ಟ್ರಕವಿ ಕುವೆಂಪು ಸೇರಿದಂತೆ ಅನೇಕ ಸಾಹಿತ್ಯ ದಿಗ್ಗಜರ ಹಾಗೂ ಜಾನಪದ ಕಲಾ ಪ್ರಕಾರಗಳ ಬೀಡಾಗಿದೆ. ಇಂತಹ ಶ್ರೀಮಂತ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸಲು ಕನಿಷ್ಠ ಮೂರು ದಿನಗಳ ಕಾಲ ಜಿಲ್ಲಾ ಉತ್ಸವವನ್ನು ಆಯೋಜಿಸುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದರು.

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಽಸಿ, ಸಂಬಂಧಪಟ್ಟ ಅಽಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

19/03/2026 10:05 am

Cinque Terre

940

Cinque Terre

0

ಸಂಬಂಧಿತ ಸುದ್ದಿ