ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ!

ಬೆಂಗಳೂರು: ರಾಜ್ಯದಲ್ಲಿ ಇನ್ನೆರೆಡು ದಿನಗಳ ಕಾಲ ಮಳೆ ಮುಂದುವರಿಕೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆ ನಾಳೆ ನಾಡಿದ್ದು ರಾಜ್ಯದ 23 ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿ‌ನ ಎರಡು ದಿನಗಳ ಅವಧಿಯಲ್ಲಿ ಈ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಆಲಿಕಲ್ಲು ಸಹಿತ ಮಳೆ ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ.

Edited By : Nagaraj Tulugeri
PublicNext

PublicNext

19/03/2026 11:10 am

Cinque Terre

54.87 K

Cinque Terre

2

ಸಂಬಂಧಿತ ಸುದ್ದಿ