ಚಳ್ಳಕೆರೆ : ಯುಗಾದಿ ರಂಜನ್ ಹಬ್ಬವನ್ನ ಎಲ್ಲರೂ ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಲು ಸಹಕರಿಸಬೇಕು ಎಂದು ಡಿವೈಎಸ್ಪಿ ಸತ್ಯನಾರಾಯಣರಾವ್
ಹೇಳಿದರು.
ನಗರದ ಪೋಲೀಸ್ ಠಾಣೆಯಲ್ಲಿ ಯುಗಾದಿ ರಂಜನ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಬಾರಿ ಯುಗಾದಿ ಮತ್ತು ರಂಜಾನ್ ಹಬ್ಬಗಳು ಒಂದೇ ಅವಧಿಯಲ್ಲಿ ಬಂದಿರುವುದು ಸೌಹಾರ್ದತೆಯ ಸಂಕೇತವಾಗಿದ್ದು, ಹಿಂದು ಹಾಗೂ ಮುಸ್ಲಿಂ ಸಮುದಾಯದವರು ಪರಸ್ಪರ ಸಹಕಾರದಿಂದ ಯಾವುದೇ ಅನಾಹುತಗಳಿಗೆ ಅವಕಾಶ ಕೊಡದೆ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಹೇಳಿದರು.
ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ ಮಾತನಾಡಿ.ಹಬ್ಬಗಳು ಶಾಂತಿ ಮತ್ತು ನೆಮ್ಮದಿಗಾಗಿ ಆಚರಿಸಬೇಕಾಗಿದ್ದು ಹಬ್ಬದ ನೇಪದಲ್ಲಿ ಜೂಜಾಟ ,ಅಥವಾ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಹಬ್ಬದ ಹೆಸರಿನಲ್ಲಿ ಜೂಜಾಟ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Kshetra Samachara
19/03/2026 11:12 am
LOADING...