ಬೆಳಗಾವಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಬೆಳಗಾವಿ ಸರ್ದಾರ್ ಮೈದಾನದಿಂದ ಪಾದಯಾತ್ರೆ ಮೂಲಕ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಬಿವಿಪಿ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.ಇದೇ ವೇಳೆ ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬರಬೇಕೆಂದು ಎಬಿವಿಪಿ ಕಾರ್ಯಕರ್ತರು ಪಟ್ಟುಹಿಡಿದರು. ಯಾವುದೇ ಅನುಮತಿ ಇಲ್ಲದೆ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದು ಪೊಲೀಸರು ಮನವರಿಕೆ ಮಾಡುವ ಕೆಲಸ ಮಾಡಿದರು.ಆದರೆ ಪೊಲೀಸರ ಮನವೊಲಿಕೆಗೂ ಬಗ್ಗದ ಹಿನ್ನೆಲೆ ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.ಈ ವೇಳೆ ಕೆಲಕಾಲ ಪೊಲೀಸರು ಹಾಗೂ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿಗೆ ಚೆನ್ನಮ್ಮ ವೃತ್ತ ಸಾಕ್ಷಿಯಾಗುತ್ತದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.50ಲಕ್ಷಕ್ಕೂ ಹೆಚ್ಚಿನ ಹುದ್ದೆಗಳು
ಸರ್ಕಾರದ ಖಾಲಿ ಇದ್ದು ಆ ಹುದ್ದೆಗಳ ಭರ್ತಿ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಎಂದು ಆರೋಪಿಸಿದ ಕಾರ್ಯಕರ್ತರು, ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲಕ್ಷಾಂತರ ಹುದ್ದೆಗಳು ಖಾಲಿ ಇವೆ.ಆದರೂ ಸರ್ಕಾರ ನೇಮಕಾತಿ ಮಾಡುತ್ತಿಲ್ಲ ಇದರ ಪರಿಣಾಮ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ದೂಡುವಂತಿದೆ. ಹಾಗಾಗಿ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು.ನೇಮಕಾತಿ ವೇಳೆ ವಯೋಮಿತಿ ಸಡಿಲಿಕೆ ಮಾಡಬೇಕು. ರಾಜ್ಯದ ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡುವುದು ಸೇರಿದಂತೆ ಸಮಯಕ್ಕೆ ಸರಿಯಾಗಿ ಫಲಿತಾಂಶ ಮತ್ತು ಅಂಕಪಟ್ಟಿ ಹಾಗೂ ವಿದ್ಯಾರ್ಥಿಗಳಿಗೆ ಸಮರ್ಪಕ ಮಾಸಿಕ ವೇತನ ಹಾಗೂ ಪ್ರೊತ್ಸಾಹಧನ ನೀಡುವಂತೆ ಆಗ್ರಹಿಸಿದರು.
Kshetra Samachara
19/03/2026 11:22 am
LOADING...