ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ರೆಡ್ಡಿಹಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು - ಗ್ರಾಮಸ್ಥರ ಬದುಕು ಅಸ್ತವ್ಯಸ್ತ

ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದಲ್ಲಿ ಭಾರೀ ಮಳೆಯಿಂದ ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗ್ರಾಮದ ಬಸ್ ನಿಲ್ದಾಣ ಸಮೀಪದ ಅಂಗನವಾಡಿ ಕೇಂದ್ರದ ಹಿಂಭಾಗದಲ್ಲಿರುವ ಚನ್ನಕೇಶವ ಅವರ ಮನೆಗೆ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ, ದಿನನಿತ್ಯ ಬಳಕೆಯ ವಸ್ತುಗಳು ಹಾನಿಗೊಂಡಿವೆ. ಮಳೆನೀರು ಮನೆಗೆ ನುಗ್ಗಿದ ಪರಿಣಾಮ ಕುಟುಂಬಸ್ಥರು ರಾತ್ರಿಯಿಡೀ ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯರ ಆರೋಪದ ಪ್ರಕಾರ, ಹಲವು ವರ್ಷಗಳಿಂದ ಇದ್ದ ಚರಂಡಿಯನ್ನು ಕೆಲವರು ಮುಚ್ಚಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಚರಂಡಿ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಮಳೆನೀರು ನೇರವಾಗಿ ಮನೆಗಳಿಗೆ ಹರಿದು ಬರುತ್ತಿದೆ.

ಗುರುವಾರ ರಾತ್ರಿ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಮುಚ್ಚಿರುವ ಚರಂಡಿಯನ್ನು ತೆರವುಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Edited By :
PublicNext

PublicNext

19/03/2026 12:58 pm

Cinque Terre

14.7 K

Cinque Terre

0

ಸಂಬಂಧಿತ ಸುದ್ದಿ