ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ವಿದ್ಯುತ್ ಕಂಬಕ್ಕೆ ಬೈಕು ಡಿಕ್ಕಿ - ಓರ್ವ ಸಾವು, ಮತ್ತೊಬ್ಬನಿಗೆ ಗಾಯ

ಸುಂಟಿಕೊಪ್ಪ: ಸುಂಟಿಕೊಪ್ಪ ಸಮೀಪದ ಕೆಂಚಟ್ಟಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಸವಾರ ಗಂಭೀರ ಗಾಯಗಳಿಂದ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸುಂಟಿಕೊಪ್ಪ ಸಮೀಪದ ಮಾದಾಪುರ ಗ್ರಾಮ ಪಂಚಾಯಿತಿಯ ಜಂಬೂರು ಪಾಣಿ ನಿವಾಸಿ, ಪಶು ಆಸ್ಪತ್ರೆಯಲ್ಕಿ ಸಿಬ್ಬಂದಿಯಾಗಿರುವ

ಅನಿಲ್ ಮೃತ ದುರ್ದೈವಿಯಾಗಿದ್ದಾನೆ. ಮತ್ತೊಬ್ಬ ಸವಾರ ಗರಗಂದೂರು ರು ನಿವಾಸಿ ದಿನೇಶ್ ಸಣ್ಣ ಪುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಸುಂಟಿಕೊಪ್ಪ ಕಡೆಯಿಂದ ಮಾದಾಪುರ ಕಡೆಗೆ ತೆರಳುತ್ತಿದ್ದ ಸಂದರ್ಭ ಚಾಲಕ ಅನಿಲ್ ಅವರ ನಿಯಂತ್ರಣ ಕಳೆದುಕೊಂಡ ಬೈಕು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಅನಿಲ್ ಅವರು ಸ್ಥಳದಲ್ಲಿ ಮೃತಪಟ್ಟರೆ, ಸಣ್ಣಪುಟ್ಟ ಗಾಯಗಳಿಂದ ದಿನೇಶ್ ಅವರು ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

19/03/2026 03:39 pm

Cinque Terre

180

Cinque Terre

0

ಸಂಬಂಧಿತ ಸುದ್ದಿ