ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ದೇಮಟ್ಟಿ ಗ್ರಾಮದ ರೈತರು ಇಂದು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಒಂದು ವಾರದಿಂದ ಗ್ರಾಮದ ಜಮೀನುಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಅಷ್ಟೇ ಅಲ್ಲದೆ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದಲೇ ರೈತರು ಕಚೇರಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರೂ, ಅಧಿಕಾರಿಗಳು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಕಷ್ಟಪಟ್ಟು ಬೆಳೆಸಿದ ಬೆಳೆ ಕಣ್ಣೆದುರೇ ಒಣಗುತ್ತಿರುವುದನ್ನು ಕಂಡು ಕಂಗಾಲಾಗಿರುವ ರೈತರು, ಕೂಡಲೇ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
PublicNext
19/03/2026 04:23 pm
LOADING...