ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ನಡೆದ ಮಾರಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸ್ನೇಹಿತರ ನಡುವೆ ಪಾರ್ಟಿ ವೇಳೆ ಎಣ್ಣೆ ಮತ್ತಿನಲ್ಲಿ ನಡೆದ ಗಲಾಟೆಯೇ ಈ ದಾಳಿಗೆ ಕಾರಣ ಎಂದು ತಿಳಿದುಬಂದಿದೆ.
ಘಟನೆ ವಿವರ: ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದ ಸ್ನೇಹಿತರ ನಡುವೆ ಕಲಹ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಜೀವನ್ ಎಂಬಾತ ತನ್ನ ಸ್ನೇಹಿತರನ್ನು ಕರೆಸಿದ್ದು, ಕಾರಿನಲ್ಲಿ ಬಂದ ಗ್ಯಾಂಗ್ ಮುನಿರಾಜ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಸದ್ಯ, ಪಾರ್ಟಿ ವೇಳೆ ಎಣ್ಣೆ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಮಾರಕ ದಾಳಿಗೆ ತಿರುಗಿ, ಈ ಪ್ರಕರಣದಲ್ಲಿ ಜೀವನ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
PublicNext
19/03/2026 04:39 pm
LOADING...