ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬೇಸಿಗೆಯ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಹಾಗೂ ಕಂದಾಯ ವಿಷಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಬೇಕು. ನೀರಿನ ಅಭಾವವಿರುವ ಕಡೆಗಳಲ್ಲಿ ತಕ್ಷಣವೇ ಸ್ಪಂದಿಸಿ, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯುವ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಒಂದು ವೇಳೆ ಖಾಸಗಿ ಬೋರ್‌ವೆಲ್‌ಗಳ ಲಭ್ಯತೆ ಇಲ್ಲದಿದ್ದಲ್ಲಿ, ಟ್ಯಾಂಕರ್‌ಗಳ ಮೂಲಕ ಜನರಿಗೆ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು. ಕೇವಲ ಮನುಷ್ಯರಿಗಷ್ಟೇ ಅಲ್ಲದೆ, ಜಾನುವಾರುಗಳಿಗೂ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Kshetra Samachara
19/03/2026 05:21 pm
LOADING...