ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಆತಂಕ ತರಿಸಿದ ವಿದ್ಯುತ್ ಕಂಬದಲ್ಲಿನ ಕೇಬ್ ವೈರ್

ಚಿತ್ರದುರ್ಗದ ಐಯ್ಯಣ್ಣನ ಪೇಟೆಯ ವಾಸವಿ ಶಾಲೆ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಕೇಬಲ್‌ಗಳಿಗೆ ವ್ಯಾಪಿಸಿ, ಬೆಂಕಿಯ ಉಂಡೆಗಳು ನೆಲಕ್ಕೆ ಬೀಳುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಯಿತು.

ಸ್ಥಳೀಯರು ತಕ್ಷಣವೇ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳವನ್ನು ಕರೆಸಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಸ್ಪಂದಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಸಂಭವಿಸಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದರು. ಸುಮಾರು 20 ನಿಮಿಷಗಳ ಕಾಲ ಕೇಬಲ್‌ಗಳು ಹೊತ್ತಿ ಉರಿದ ಈ ಘಟನೆ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Edited By : PublicNext Desk
Kshetra Samachara

Kshetra Samachara

19/03/2026 06:00 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ