ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಿರಿಯ ಸಹೋದರಿ ಜವರಮ್ಮ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಸಹೋದರಿಯ ಅಗಲಿಕೆಗೆ ಎಚ್.ಡಿ. ದೇವೇಗೌಡರು ತೀವ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.
PublicNext
19/03/2026 07:15 pm
LOADING...