ಹುಬ್ಬಳ್ಳಿ: ಸಾಮಾಜಿಕ ಜಾಲತಾಣಕ್ಕಾಗಿ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಗರದ ಚೇತನ ಕಾಲೇಜು ಹಿಂಭಾಗದಲ್ಲಿ ನಡೆದಿದೆ.
ಯುವಕ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ರೀಲ್ಸ್ ಚಿತ್ರೀಕರಿಸುತ್ತಾ ಸಾಗುತ್ತಿದ್ದ ಎನ್ನಲಾಗಿದೆ. ಈ ವೇಳೆ ಎದುರುಗಡೆಯಿಂದ ಬಂದ ಆಡಿ ಕಾರಿಗೆ ಸ್ಕೂಟರ್ ವೇಗವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಆಡಿ ಕಾರ್ ಕೂಡ ಜಖಂಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/03/2026 08:20 pm
LOADING...