ಮುಂಬೈ: ಹೊಸ ಭರವಸೆಗಳೊಂದಿಗೆ ಹೊಸ ವರ್ಷದ ಸಂಭ್ರಮ ಎಲ್ಲೆಡೆ ಮನೆ ಮಾಡಿರುವ ಈ ಶುಭ ಸಂದರ್ಭದಲ್ಲಿ, ಕ್ರಿಕೆಟ್ ಲೋಕದ ಆರಾಧ್ಯ ದೈವ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಯುಗಾದಿ ಹಾಗೂ ಗುಡಿ ಪಾಡ್ವ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡ ಸಚಿನ್ ಅವರ ಈ ಸರಳ ಮತ್ತು ಸಾಂಪ್ರದಾಯಿಕ ಆಚರಣೆ ಈಗ ಎಲ್ಲೆಡೆ ವೈರಲ್ ಆಗಿ ಅಭಿಮಾನಿಗಳ ಮನಗೆದ್ದಿದೆ.
ಸಚಿನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಸಂತೋಷದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ, ತಮ್ಮ ತಾಯಿಯ ಆಶೀರ್ವಾದ ಪಡೆದು ಅಭಿಮಾನಿಗಳಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. "ಈ ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ತರಲಿ" ಎಂದು ಅವರು ಹೃತ್ಪೂರ್ವಕವಾಗಿ ಹಾರೈಸಿದ್ದಾರೆ.
PublicNext
19/03/2026 08:24 pm
LOADING...