ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳಸ: ಯುಗಾದಿ ಹಬ್ಬದಂದೇ ದೇವಸ್ಥಾನದ ಮುಂದೆ ವಾಮಾಚಾರ - ಕಾಲಭೈರವನ ಗುಡಿಯೇ ಟಾರ್ಗೆಟ್?

ಕಳಸ: ಯುಗಾದಿ ಹಬ್ಬದ ಸಂಭ್ರಮದ ನಡುವೆಯೇ ಭೀತಿ ಮೂಡಿಸುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಂಚಿನಕೆರೆ ಕಾಲಭೈರವೇಶ್ವರ ದೇವಸ್ಥಾನದ ಬಳಿ ನಡೆದಿದೆ. ತಡರಾತ್ರಿ ದುಷ್ಕರ್ಮಿಗಳು ವಾಮಾಚಾರ ನಡೆಸಿದ್ದು ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ. ದೇವಸ್ಥಾನದ ಮುಂಭಾಗ ದೊಡ್ಡ ಕಲ್ಲುಗಳನ್ನು ವೃತ್ತಾಕಾರದಲ್ಲಿ ಇಟ್ಟು ಅದಕ್ಕೆ ಅರಿಶಿನ, ಕುಂಕುಮ ಬಳಿಯಲಾಗಿದೆ.

ಅಲ್ಲದೇ ನಿಂಬೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ನಾಣ್ಯಗಳನ್ನು ಬಳಸಿ ವಾಮಾಚಾರ ನಡೆಸಿರುವುದು ಕಂಡುಬಂದಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕಳಸೇಶ್ವರ ಸ್ವಾಮಿ ದೇವಸ್ಥಾನಕ್ಕೆ ಒಳಪಡುವ ಈ ಕಾಲಭೈರವನ ಗುಡಿಯು ಅತ್ಯಂತ ಪವಿತ್ರವಾದುದು. ಪ್ರತಿ ವರ್ಷ ಕಳಸೇಶ್ವರ ದೇವಸ್ಥಾನದ ಗಿರಿಜಾಕಲ್ಯಾಣ ರಥ ಇದೇ ಮಾರ್ಗವಾಗಿ ಸಾಗುತ್ತದೆ. ವಿಶೇಷವೆಂದರೆ, ಕಳೆದ ವರ್ಷ ಯುಗಾದಿಯ ಹಿಂದಿನ ದಿನವೇ ಇದೇ ದೇವಸ್ಥಾನದಲ್ಲಿ ಕಳ್ಳತನ ನಡೆದಿತ್ತು. ಈಗ ಹಬ್ಬದ ದಿನವೇ ಜನವಸತಿ ಇರುವ ಪ್ರದೇಶದಲ್ಲಿ, ಅದರಲ್ಲೂ ನಿತ್ಯ ನೂರಾರು ಜನರು ಸಂಚರಿಸುವ ಜಾಗದಲ್ಲಿ ಇಂತಹ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಧ್ಯರಾತ್ರಿ 2 ರಿಂದ 3 ಗಂಟೆಯ ಅವಧಿಯಲ್ಲಿ ಈ ವಾಮಾಚಾರ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಕಳಸ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Edited By :
PublicNext

PublicNext

19/03/2026 09:13 pm

Cinque Terre

17.37 K

Cinque Terre

0

ಸಂಬಂಧಿತ ಸುದ್ದಿ