ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೀಲ್ಸ್ ಹುಚ್ಚಾಟಕ್ಕೆ ಯುವಕ ಬಲಿ - ಸ್ಟಂಟ್ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಆಗ್ರಹ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಿಗಾಗಿ ‘ರೀಲ್ಸ್’ ಚಿತ್ರೀಕರಿಸುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ, ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಮೃತ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬಿಜೆಪಿ ಮುಖಂಡ ವೀರೇಶ ಸಂಗಳದ ಅವರ ಪುತ್ರ ರೀಲ್ಸ್ ಮಾಡುವ ವೇಳೆ ದುರ್ಘಟನೆಯಲ್ಲಿ ಮೃತಪಟ್ಟಿರುವುದು ದುಃಖದ ಸಂಗತಿ ಎಂದು ಅವರು ಹೇಳಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವಕರು ರೀಲ್ಸ್ ಹುಚ್ಚಾಟಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಈ ಘಟನೆ ತಂದೆ-ತಾಯಿಗಳಿಗೆ ಪಾಠವಾಗಬೇಕು. ಮಕ್ಕಳಿಗೆ ವಾಹನಗಳನ್ನು ನೀಡುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ ಅವರು, ಯುವಕರು ಸ್ಟಂಟ್ ಎಂಬ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

ಇಂತಹ ಘಟನೆಗಳು ನಡೆದಾಗ ವಾಹನದ ಮಾಲೀಕರ ಮೇಲೂ ಪ್ರಕರಣ ದಾಖಲಾಗುವ ಸಾಧ್ಯತೆ ಇರುತ್ತದೆ. ರೀಲ್ಸ್‌ಗಾಗಿ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ವಿಷಾದನೀಯ ಎಂದ ಅವರು, ಸ್ಟಂಟ್ ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/03/2026 10:24 pm

Cinque Terre

48.57 K

Cinque Terre

5

ಸಂಬಂಧಿತ ಸುದ್ದಿ