ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಆಲಿಕಲ್ಲು ಮಳೆಗೆ ಕಲ್ಲಂಗಡಿ ಬೆಳೆ ನಾಶ, ರೈತ ಕಂಗಾಲು

ಶಿವಮೊಗ್ಗ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ನಿನ್ನೆ ಮಲೆನಾಡಿನಲ್ಲಿ ಸುರಿದ ಆಲಿಕಲ್ಲು ಮಳೆ ಅಕ್ಷರಶಃ ರೈತರ ಪಾಲಿಗೆ ನರಕವನ್ನೇ ತೋರಿಸಿದೆ.

ನಿನ್ನೆ ಸುರಿದ ಆಲಿಕಲ್ಲಿನ ಮಳೆ ರೈತರ ಯುಗಾದಿ ಸಂಭ್ರಮವನ್ನೇ ಕಸಿದುಕೊಂಡಿದೆ. ಶಿವಮೊಗ್ಗ ತಾಲೂಕಿನ ಅನುಪಿನಕಟ್ಟೆ ಗ್ರಾಮದಲ್ಲಿ ಕಲ್ಲಂಗಡಿ ಬೆಳೆ ಆಲಿಕಲ್ಲು ಮಳೆಗೆ ನಾಶವಾಗಿದೆ. ಮೂರು ಎಕರೆಯಲ್ಲಿ ಬೆಳೆದಿದ್ದ ಕಲ್ಲಂಗಡಿ ಸಂಪೂರ್ಣ ನಾಶವಾಗಿದೆ.

ಮೂರು ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ ಕಲ್ಲಂಗಡಿ ಸಂಪೂರ್ಣ ಮಣ್ಣುಪಾಲಾಗಿದೆ. ಅನುಪಿನಕಟ್ಟೆ ಗ್ರಾಮದ ರಾಮಣ್ಣ ಎಂಬುವರು ಬೆಳೆದಿದ್ದ ಕಲ್ಲಂಗಡಿ ಸಂಪೂರ್ಣ ನಾಶವಾಗಿದೆ.

25 ದಿನದಲ್ಲಿ ಕಟಾವು ಮಾಡಬೇಕಿದ್ದ ಕಲ್ಲಂಗಡಿ ಸಂಪೂರ್ಣ ನಾಶವಾಗಿದೆ. ಬೆಳೆ ನಾಶವಾದ್ರೂ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಕರೆ ಮಾಡಿದ್ರೂ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

19/03/2026 10:43 pm

Cinque Terre

16.54 K

Cinque Terre

0

ಸಂಬಂಧಿತ ಸುದ್ದಿ