ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಆಕಸ್ಮಿಕ ಬೆಂಕಿ ಅವಘಡಕ್ಕೆ 10ಕ್ಕೂ ಹೆಚ್ಚು ಎಮ್ಮೆಗಳು ಬಲಿ; 10 ಲಕ್ಷಕ್ಕೂ ಅಧಿಕ ನಷ್ಟ

ಹಾವೇರಿ: ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ದನದ ಕೊಟ್ಟಿಗೆಯಲ್ಲಿದ್ದ 10ಕ್ಕೂ ಹೆಚ್ಚು ಎಮ್ಮೆಗಳು ಸಜೀವ ದಹನವಾಗಿವೆ. ಗ್ರಾಮದ ರೈತ ಪರಮೇಶ ಜಾಡರ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ಮೂಕ ಪ್ರಾಣಿಗಳು ಬೆಂಕಿಗೆ ಆಹುತಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

​ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕೊಟ್ಟಿಗೆಯಾದ್ಯಂತ ವ್ಯಾಪಿಸಿದೆ. ಈ ದುರಂತದಲ್ಲಿ ಎಮ್ಮೆಗಳು ಹಾಗೂ ಕೊಟ್ಟಿಗೆ ಸೇರಿದಂತೆ ಅಂದಾಜು 10 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಆಸ್ತಿಪಾಸ್ತಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

​ಕನವಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಾರು ಐದು ಬಾರಿ ಅಗ್ನಿ ಅವಘಡಗಳು ಸಂಭವಿಸಿವೆ. ಪದೇ ಪದೇ ಬೆಂಕಿ ಬೀಳುತ್ತಿರುವುದನ್ನು ಗಮನಿಸಿದರೆ, ಇದು ಕಿಡಿಗೇಡಿಗಳ ಕೃತ್ಯವಿರಬಹುದು ಎಂದು ಗ್ರಾಮಸ್ಥರು ಬಲವಾಗಿ ಶಂಕಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಒತ್ತಾಯ ಕೇಳಿಬಂದಿದೆ.

Edited By : Shivu K
PublicNext

PublicNext

19/03/2026 10:52 pm

Cinque Terre

17.78 K

Cinque Terre

0

ಸಂಬಂಧಿತ ಸುದ್ದಿ