ಧಾರವಾಡ: ಯುಗಾದಿ ಹಬ್ಬದ ಪ್ರಯುಕ್ತ ಧಾರವಾಡದ ಶಾಂತಿ ನಿಕೇತನ ನಗರದಲ್ಲಿ ನಡೆದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು.
ಧಾರವಾಡ ನಗರದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿಪೂರ್ವಕವಾಗಿ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ದೇವಸ್ಥಾನದ ಆವರಣದಿಂದ ಹೊರಟ ಪಲ್ಲಕ್ಕಿ ಉತ್ಸವವು ಸಕಲ ವಾದ್ಯ ಮೇಳಗಳೊಂದಿಗೆ ಶಾಂತಿ ನಿಕೇತನ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಭಕ್ತರ ಗಮನ ಸೆಳೆಯಿತು.
Kshetra Samachara
20/03/2026 07:32 am
LOADING...