ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಎರಡು ದಿನ ಮುಂದುವರಿಯಲಿದೆ ವರುಣನ ಸಿಂಚನ: ಗುಡುಗು ಸಹಿತ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಆಲಿಕಲ್ಲು ಸಹಿತ ಮಳೆ ಆಗುತ್ತಿದ್ದು ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಮಾರ್ಚ್ 20 ಮತ್ತು 21ರಂದು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಮಲೆನಾಡಿನ ಭಾಗಗಳಲ್ಲಿ ತಂಪಾದ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ ವೇಗ) ಆಲಿಕಲ್ಲು ಮಳೆ ಬೀಳುವ ಸಾಧ್ಯತೆ. ಜಿಲ್ಲೆಯಲ್ಲಿ ಇಂದು ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ 17°C ದಾಖಲಾಗುವ ಸಾಧ್ಯತೆಯಿದ್ದು, ಮುಂದಿನ 48 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡಗಳಿಂದ ಕೂಡಿರಲಿದೆ. ಈ ಅಕಾಲಿಕ ಮಳೆಯು ಈಗಾಗಲೇ ಜಿಲ್ಲೆಯ ಹಲವೆಡೆ ತಂಪಾದ ವಾತಾವರಣ ನಿರ್ಮಿಸಿದ್ದರೂ, ಕಾಫಿ ಹೂವು ಮತ್ತು ಮಿಡಿಗಳು ಉದುರುವ ಭೀತಿ ಬೆಳೆಗಾರರಲ್ಲಿ ಮೂಡಿದೆ.

Edited By : PublicNext Desk
Kshetra Samachara

Kshetra Samachara

20/03/2026 10:13 am

Cinque Terre

3.96 K

Cinque Terre

0

ಸಂಬಂಧಿತ ಸುದ್ದಿ