ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು: ಪ್ರತಿಭಟನೆ

ತುಮಕೂರು: ಜೂಜಾಡುತ್ತಿದ್ದ ಆರೋಪದಡಿ ಠಾಣೆಗೆ ಕರೆತಂದು ವಿಚಾರಣೆ ಮಾಡುವ ವೇಳೆ ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಳನಾಡು ಗ್ರಾಮದಲ್ಲಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ವ್ಯಕ್ತಿಗಳನ್ನು ಕರೆತಂದಿದ್ದವರ ಪೈಕಿ ಗ್ರಾಮದ ಗುಡಿಗೌಡ ಕಾಂತರಾಜು(50) ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಸಾವಿಗೆ ಹುಳಿಯಾರು ಪೊಲೀಸರೇ ನೇರ ಹೊಣೆ ಎಂದು ಆರೋಪಿಸಿ ರಾತ್ರಿ ಠಾಣೆ ಮುಂದೆ ಶವ ಇಟ್ಟು ಊರಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿದ್ದರು.

Edited By : Nagaraj Tulugeri
Kshetra Samachara

Kshetra Samachara

20/03/2026 10:34 am

Cinque Terre

940

Cinque Terre

0

ಸಂಬಂಧಿತ ಸುದ್ದಿ