ಹುಕ್ಕೇರಿ : ಬೆಳಗಾವಿಯಿಂದ ಹುಕ್ಕೇರಿ ಪಟ್ಟಣದತ್ತ ಪ್ರಯಾಣಿಸುತ್ತಿದ್ದ ಚಿಕ್ಕೋಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಪ್ರಭಾವತಿ ಪಾಟೀಲ ಅವರ ಕಾರು, ಗೂಡ್ಸ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಈ ಘಟನೆ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬಿಇಓ ಹಾಗೂ ಪತಿಗೆ ಸಣ್ಣಪುಟ್ಟ ಗಾಯ
ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಬಿಇಓ ಆಗಿರುವ ಪ್ರಭಾವತಿ ಪಾಟೀಲ ಅವರು ತಮ್ಮ ಪತಿಯೊಂದಿಗೆ ಬಲೇನೋ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಕಾರು ಎದುರಿದ್ದ ಗೂಡ್ಸ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಪಿಕಪ್ ವಾಹನ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಯಿಂದ ಕಾರಿನ ಏರ್‌ಬ್ಯಾಗ್‌ಗಳು ತೆರೆದುಕೊಂಡ ಕಾರಣ, ಪ್ರಭಾವತಿ ಪಾಟೀಲ ಹಾಗೂ ಅವರ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲು, ತನಿಖೆ ಆರಂಭ
ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.
PublicNext
20/03/2026 03:00 pm
LOADING...