ಚಿತ್ರದುರ್ಗ : ನಗರದ ಮಾಳಪ್ಪನಹಟ್ಟಿಯ ಮನೆಯೊಂದರಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡವರು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿ, ಸಂತ್ರಸ್ತರ ಆರೋಗ್ಯ ವಿಚಾರಿಸಿದರು.
ಮಾರ್ಚ್ 19ರಂದು ಗುರುವಾರ ಸಂಜೆ ಸುಮಾರು 5.30ಕ್ಕೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಆಸ್ಪತ್ರೆಗೆ ಭೇಟಿ ನೀಡಿದರು.
PublicNext
20/03/2026 05:26 pm
LOADING...