ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಸಂತಾಪ ಸೂಚಿಸಿದ ಸಚಿವ ಮಧುಬಂಗಾರಪ್ಪ

ಶಿವಮೊಗ್ಗ : ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಯಿಂದ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಂತಾಪ ಸೂಚಿಸಿದರು.

ತಮ್ಮ ವೃತ್ತಿ ಬದುಕನ್ನು ವನ್ಯಜೀವಿಗಳ ಸೇವೆಗೆ ಮುಡಿಪಾಗಿಟ್ಟ ಯುವ ವೈದ್ಯೆಯನ್ನು ಕಳೆದುಕೊಂಡಿರುವುದು ಕೇವಲ ಅವರ ಕುಟುಂಬ ಮತ್ತು ಇಲಾಖೆಗೆ ನಷ್ಟವಲ್ಲದೆ ಇಡೀ ಸಮಾಜಕ್ಕೆ ಆದ ನಷ್ಟ, ಇಂತಹ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಸರ್ಕಾರ ನಿಲ್ಲಲಿದ್ದು, ಈಗಾಗಲೇ ಅರಣ್ಯ ಸಚಿವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Edited By : PublicNext Desk
PublicNext

PublicNext

20/03/2026 06:09 pm

Cinque Terre

5.02 K

Cinque Terre

0

ಸಂಬಂಧಿತ ಸುದ್ದಿ