ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿ ಬೈಕ್ ಸವಾರನ ಬೇಜವಾಬ್ದಾರಿ ಚಾಲನೆ - ಸರಣಿ ಅಪಘಾತ

​ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸುತ್ತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಸರಣಿ ಅಪಘಾತಕ್ಕೆ ಕಾರಣನಾಗಿದ್ದಾನೆ.

ಅತಿ ವೇಗವಾಗಿ ಬಂದ ಈ ಬೈಕ್ ಸವಾರ ರಸ್ತೆಯಲ್ಲಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದ ತೀವ್ರತೆಗೆ ಆತನ ದ್ವಿಚಕ್ರ ವಾಹನವು ಚಲಿಸುತ್ತಿದ್ದ ಮಿನಿ ಟ್ರಕ್ ಒಂದರ ಅಡಿಯಲ್ಲಿ ಸಿಲುಕಿಕೊಂಡಿದೆ.

​ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ಮತ್ತೊಬ್ಬ ಬೈಕ್ ಸವಾರ ಕೂಡ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ಘಟನೆಯಿಂದಾಗಿ ಬನ್ನೇರುಘಟ್ಟ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

Edited By : Vijay Kumar
PublicNext

PublicNext

20/03/2026 06:15 pm

Cinque Terre

10.92 K

Cinque Terre

0