ರಬಕವಿ-ಬನಹಟ್ಟಿ : ರಾಜ್ಯದ ನೇಕಾರರು ತೀವ್ರ ಸಂಕಷ್ಟದಲ್ಲಿದ್ದು, ಅವರ ಸಮಸ್ಯೆಗಳ ಪರಿಹಾರಕ್ಕಾಗಿ ಮುಂಬರುವ ಅಧಿವೇಶನದಲ್ಲಿ ಸರ್ಕಾರವು 1500 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.
ಅವರು ಮಾತನಾಡಿ, ನೇಕಾರರು ತಮ್ಮ ವಿವಿಧ ಸಮಸ್ಯೆಗಳಿಗಾಗಿ ಈಗಾಗಲೇ ಅನೇಕ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ, ನೇಕಾರರ ಬಡ್ಡಿ ಸಹಾಯಧನ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮಾರ್ಚ್ 23ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗುವುದಾಗಿ ತಿಳಿಸಿದರು.
PublicNext
20/03/2026 08:03 pm
LOADING...