ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಅಂಬೇಡ್ಕರ್-ಜಗಜೀವನ ರಾಮ್ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತಾ ಸಭೆ

ಗದಗ : ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸುವ ಕುರಿತು ಗದಗ ಜಿಲ್ಲಾಡಳಿತ ಪೂರ್ವ ಸಿದ್ಧತಾ ಸಭೆ ನಡೆಸಿತು. ಇಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಈ ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಸಮಾಜಕ್ಕೆ ಪ್ರೇರಣೆ ನೀಡುವ ಕಾರ್ಯಕ್ರಮಗಳಾಗಿ ರೂಪಿಸಬೇಕು ಎಂದು ತಿಳಿಸಲಾಯಿತು.

ಜಿಲ್ಲಾಧಿಕಾರಿಗಳ ಸೂಚನೆಗಳು

ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮ ಯಶಸ್ವಿಯಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

20/03/2026 08:09 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ