ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

ಶಿವಮೊಗ್ಗ : ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಅಂಗಡಿಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಧಿನಗರದ ನಿವಾಸಿ ಹಾಗೂ ಬಟ್ಟೆ ಅಂಗಡಿ ಮಾಲೀಕ ಸುನಿಲ್.ಆರ್.ಎಲ್. ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಕಳುವಾಗಿದೆ. ಬಿಳಿ ಬಣ್ಣದ ಹೋಂಡಾ ಆಕ್ಟಿವಾ ವಾಹನದಲ್ಲಿ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತಮ್ಮ ಅಂಗಡಿಗೆ ಬಂದಿದ್ದರು. ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಬೆಳಗ್ಗೆ 11 ಗಂಟೆಗೆ ವಾಪಸ್ ಬಂದು ನೋಡಿದಾಗ ಹೋಂಡಾ ಆಕ್ಟೀವಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

20/03/2026 08:24 pm

Cinque Terre

460

Cinque Terre

0

ಸಂಬಂಧಿತ ಸುದ್ದಿ