ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಆರ್‌ಎಸ್‌ಎಸ್‌ಗೆ 100 ವರ್ಷ - ರಕ್ತದಾನ ಶಿಬಿರಕ್ಕೆ ಮುಂದಾದ ಸೇವಾಭಾರತಿ ಟ್ರಸ್ಟ್

ಧಾರವಾಡ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕ್ಕೆ 100 ವರ್ಷಗಳಾದ ಹಿನ್ನೆಲೆಯಲ್ಲಿ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಧಾರವಾಡದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸೇವಾ ಭಾರತಿ ಟ್ರಸ್ಟಿ ಮಂಜುನಾಥ ಮಕ್ಕಳಗೇರಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ರಕ್ತದಾನ ಶಿಬಿರ ಧಾರವಾಡದ ಹಳಿಯಾಳ ರಸ್ತೆಯಲ್ಲಿರುವ ಲಿಂಗಾಯತ ಭವನದಲ್ಲಿ ನಡೆಯಲಿದೆ. ಮಾ.23 ರಂದು ಬೆಳಿಗ್ಗೆ 6 ರಿಂದ ಸಂಜೆ 7 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಈ ದಿನ ಸುಮಾರು ಎರಡೂವರೆ ಸಾವಿರ ಜನ ರಕ್ತದಾನ ಮಾಡಲಿದ್ದಾರೆ ಎಂದರು.

ರಕ್ತಹೀನತೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರೆಗೆ ರಕ್ತದ ನೆರವು ನೀಡುವ ಉದ್ದೇಶದಿಂದ ಹಾಗೂ ರಕ್ತದಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಈ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಈಗಾಗಲೇ 1800 ಜನ ರಕ್ತದಾನ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಆರ್‌ಎಸ್‌ಎಸ್‌ಗೆ 100 ವರ್ಷಗಳಾದ ಹಿನ್ನೆಲೆ ಈ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಮಾಡುವ ಉದ್ದೇಶದಿಂದ ಈ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಮಂಜುನಾಥ ಮಕ್ಕಳಗೇರಿ ಹೇಳಿದರು.

Edited By : Manjunath H D
Kshetra Samachara

Kshetra Samachara

20/03/2026 08:29 pm

Cinque Terre

17 K

Cinque Terre

0

ಸಂಬಂಧಿತ ಸುದ್ದಿ