ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಿಂಬದಿಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಮೂಲದ 35 ವರ್ಷದ ವೆಂಕಟೇಗೌಡ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಹೊಸತಡಕು ಮುಗಿಸಿ ಮನೆಯಿಂದ ದೇವನಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೆಂಕಟೇಗೌಡರ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಹಾಗೂ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಹಲವು ಪಲ್ಟಿ ಹೊಡೆದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.
ಅಪಘಾತವೆಸಗಿ ಸ್ಥಳದಿಂದ ಕಾರ್ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
PublicNext
20/03/2026 09:06 pm
LOADING...