ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದ ಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ಕಾರಿನ ವಿಚಾರವಾಗಿ ಗಲಾಟೆ ಉಂಟಾಗಿ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಗುರುವಾರ ನಡೆದ ಜಾತ್ರೆಯ ರಥೋತ್ಸವದಲ್ಲಿ ಗ್ರಾಮಸ್ಥರು ಭಕ್ತಿಭಾವದಿಂದ ಪಾಲ್ಗೊಂಡಿದ್ದರು. ಈ ವೇಳೆ ರಥೋತ್ಸವ ಸಾಗುತ್ತಿರುವ ದಾರಿ ಮಧ್ಯೆ ಸಲೀಂ ಬಡೇಖಾನ್ ಮತ್ತು ಅವರ ತಂಡ ಕಾರನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ರಥ ಸಾಗುವ ದಾರಿಯಲ್ಲಿ ಕಾರು ನಿಂತಿದ್ದರಿಂದ ಜಾತ್ರಾ ಸಮಿತಿ ಸದಸ್ಯರು ಕಾರನ್ನು ಸೈಡಿಗೆ ತೆಗೆದುಕೊಳ್ಳುವಂತೆ ವಿನಂತಿಸಿದರು.
ಆದರೆ ಈ ಮಾತಿನ ಮೇಲೆ ವಾಗ್ವಾದ ಶುರುವಾಗಿ, ಪರಿಸ್ಥಿತಿ ತೀವ್ರಗೊಂಡು ಹಲ್ಲೆಗೆ ತಿರುಗಿದೆಯೆಂಬ ಆರೋಪ ಕೇಳಿಬಂದಿದೆ. ಜಾತ್ರಾ ಸಮಿತಿಯ ಕೆಲ ಯುವಕರ ಮೇಲೆ ಸಲೀಂ ತಂಡ ದಾಳಿ ನಡೆಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಜಾತ್ರಾ ಸಮಿತಿ ಸದಸ್ಯರು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಲೀಂ ಬಡೇಖಾನ್, ಲೋಕೇಶ್ ರಾಮಜಿ ಮತ್ತು ಮಂಜುನಾಥ್ ಹಾದಿಮನಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
PublicNext
20/03/2026 09:18 pm
LOADING...