ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರಸೀಕೆರೆ: ವರುಣ್ ಹತ್ಯೆ ಪ್ರಕರಣ - ಮೃತದೇಹ ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನ

ಅರಸೀಕೆರೆ: ತಾಲ್ಲೂಕಿನ ಪ್ರಸಿದ್ಧ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ವರುಣ್ ಎಂಬ ಯುವಕನ ಶವವನ್ನು ಆರೋಪಿಗಳು ಸಂಪೂರ್ಣವಾಗಿ ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಹತ್ಯೆಯಾದ ವರುಣ್‌ನ ಶವದ ಯಾವುದೇ ಅವಶೇಷಗಳು ಸಿಗದಂತೆ ಆರೋಪಿಗಳು ಮೃತದೇಹವನ್ನು ಪೂರ್ಣವಾಗಿ ದಹಿಸಿದ್ದಾರೆ. ಇದು ಪೊಲೀಸರಿಗೆ ತನಿಖೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಳೆದ ಮಾರ್ಚ್ 15 ರಂದು ವರುಣ್ ನಾಪತ್ತೆಯಾಗಿರುವ ಬಗ್ಗೆ ಗಂಡಸಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಾಗಿತ್ತು.

ತನಿಖೆ ಚುರುಕು: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.

Edited By :
Kshetra Samachara

Kshetra Samachara

20/03/2026 09:21 pm

Cinque Terre

500

Cinque Terre

0

ಸಂಬಂಧಿತ ಸುದ್ದಿ