ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗ್ರಾಹಕನ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ, ಕೃತ್ಯ ಸಿಸಿಟಿವಿಯಲ್ಲಿ ಸೆರೆ..!!

ಹುಬ್ಬಳ್ಳಿ: ನಗರದಲ್ಲಿ ಮೊಬೈಲ್ ಕಳ್ಳರ ಹಾವಳಿ ಮತ್ತೆ ತಲೆ ಎತ್ತಿದ್ದು, ಹಾಡಹಗಲೇ ಮೊಬೈಲ್ ಅಂಗಡಿಗೆ ಬಂದ ಕಳ್ಳ ಮೊಬೈಲ್ ಕಳವು ಮಾಡಿ ಪರಾರಿಯಾದ ಘಟನೆ ನಡೆದಿದೆ.

ಹೌದು...ಚೆನ್ನಮ್ಮ ವೃತ್ತದಲ್ಲಿರುವ ಸುಮಂತ್ ಮೊಬೈಲ್ ಅಂಗಡಿಗೆ ಗ್ರಾಹಕನಂತೆ ಬಂದ ವ್ಯಕ್ತಿ, ಮಾಲೀಕನ ಗಮನ ಬೇರೆಡೆ ತಿರುಗಿದ್ದ ವೇಳೆ ನೋಡ ನೋಡುತ್ತಲೇ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದಾನೆ. ಈ ಕಳ್ಳತನದ ದೃಶ್ಯ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ನಗರದಲ್ಲಿ ಇತ್ತೀಚೆಗೆ ಇಂತಹ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ವ್ಯಾಪಾರಿಗಳಲ್ಲಿ ಆತಂಕ ಹುಟ್ಟಿಸಿದೆ. ಸದ್ಯ ಈ ಘಟನೆ ಸಬ್‌ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/03/2026 10:10 pm

Cinque Terre

84.7 K

Cinque Terre

1

ಸಂಬಂಧಿತ ಸುದ್ದಿ