ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೊಸೆ ಜೊತೆ ಅನೈತಿಕ ಸಂಬಂಧ - ಸುಪಾರಿ ಕೊಟ್ಟು ತಂದೆಯ ಕೊಲೆ ಮಾಡಿಸಿದ ಪುತ್ರ.!

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಳ ಗ್ರಾಮದಲ್ಲಿ ಮಗನಿಂದಲೇ ತಂದೆ ಕೊಲೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ದರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ.

ಗೋನಾಳ ಗ್ರಾಮದಲ್ಲಿ ಮಾರ್ಚ್ 12ರ ರಾತ್ರಿ 74 ವರ್ಷದ ಹಂಪಣ್ಣ ಸಜ್ಜನ ಎಂಬಾತನ ಕೊಲೆಯಾಗಿತ್ತು. ಕೊಲೆ ನಡೆದ ಬಳಿಕ ಈ ಹಂಪಣ್ಣ ಸಜ್ಜನ ಪುತ್ರ ಶರಣಬಸಪ್ಪ ವಡಗೇರಾ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಆರಂಭದಲ್ಲಿ ಕೊಲೆ ಯಾರು ಮಾಡಿದ್ದಾರೆ ಎಂದು ಗೊತ್ತಾಗದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಕೊಲೆ ನಡೆದ ನಾಲ್ಕು ದಿನಗಳ ಬಳಿಕ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಹಂತಕರಾದ ರಮೇಶ್, ಜಿ. ವಿರೇಶ್, ಎಂ. ವಿರೇಶ್ ಹಾಗೂ ಕೃಷ್ಣನನ್ನು ವಡಗೇರಾ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ ಬಳಿಕ ಹಂಪಣ್ಣನ ಕೊಲೆ ಹಿಂದಿನ ರಹಸ್ಯ ಬಯಲಾಗಿದೆ. ಕೊಲೆ ಮಾಡಿದವರು ತಿರುಪತಿ ಮೂಲದ ನಾಲ್ಕು ಜನ ಆದರೆ ಕೊಲೆಗೆ ಸುಪಾರಿ ಕೊಟ್ಟಿದ್ದು ಮಾತ್ರ ಹಂಪಣ್ಣ ಸಜ್ಜನ ಪುತ್ರ ನರಸರೆಡ್ಡಿ. ಮಗನೇ ತಂದೆಯನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದು ತನಿಖೆ ವೇಳೆ ಖಚಿತವಾಗಿದ್ದು, ಮೊದಲು ಆಸ್ತಿಗಾಗಿ ಕೊಲೆ ಮಾಡಿರುವುದಾಗಿ ಶಂಕಿಸಿದ್ದರು. ಆದರೆ ತನಿಖೆ ವೇಳೆ, ಕೊಲೆಯಾದ ತಂದೆಯ ಮೊಬೈಲ್‌ನಲ್ಲಿ ಫೋಟೋಗಳು ಸಿಕ್ಕಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಮೃತನ ಮೊಬೈಲ್‌ನಲ್ಲಿ ಹಲವು ಮಹಿಳೆಯರ ಜೊತೆ ತೆಗೆದುಕೊಂಡ ಫೋಟೋ ಸಿಕ್ಕಿದ್ದು, ಅನೈತಿಕ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ. ಕೊಲೆಯಾದ ವ್ಯಕ್ತಿ ತನ್ನ ಮಕ್ಕಳ ಜೊತೆ ಊರಲ್ಲಿ ಇರದೇ ಲೈಂಗಿಕ ಪಿಪಾಸೆಗಾಗಿ ಹೊಲದಲ್ಲಿ ವಾಸವಾಗಿದ್ದ. 48 ಎಕರೆ ಜಮೀನು ಹೊಂದಿದ್ದು, ಇದರಲ್ಲಿ ತನ್ನ ಮೂರು ಜನ ಮಕ್ಕಳಿಗೆ ತಲಾ 4 ಎಕರೆಯಂತೆ 12 ಎಕರೆ ಜಮೀನು ನೀಡಿದ್ದ. ಇನ್ನುಳಿದ 36 ಎಕರೆ ಜಮೀನು ತನ್ನ ಹೆಸರಿಗೆ ಇಟ್ಟುಕೊಂಡು ಬಂದ ಆದಾಯದಲ್ಲಿ ಶೋಕಿ ಮಾಡುತ್ತಿದ್ದ.

ಊರಲ್ಲಿ ಮೂರು ಜನ ಮಕ್ಕಳ ಮನೆ ಇದ್ದರೂ ಸಹ ಕಳೆದ 15 ವರ್ಷಗಳಿಂದ ಜಮೀನಲ್ಲಿ ಶೆಡ್ ಹಾಕಿಕೊಂಡು ಪತ್ನಿ ಜೊತೆ ವಾಸವಾಗಿದ್ದ. ಕಳೆದ 8 ವರ್ಷಗಳ ಹಿಂದೆ ಪತ್ನಿ ಸಾವನ್ನಪ್ಪಿದ ಬಳಿಕ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದ ಹಂಪಣ್ಣ ಮದ್ಯವ್ಯಸನಿಯೂ ಆಗಿದ್ದ. ತನ್ನ ಕಾಮತೃಷ್ಣೆ ಈಡೇರಿಸಿಕೊಳ್ಳಲು ದುಡ್ಡು ಕೊಟ್ಟು ಬೇರೆ ಮಹಿಳೆಯರನ್ನು ಶೆಡ್‌ಗೆ ಕರೆಸಿಕೊಳ್ಳುತ್ತಿದ್ದ. ಮಗನ ಹೆಂಡತಿ ಅಂದರೆ ಸೊಸೆ, ಜಮೀನಿಗೆ ಕೆಲಸಕ್ಕೆ ಬಂದಾಗಲೂ ಬಿಡುತ್ತಿರಲಿಲ್ಲ. ತನ್ನ ಪತ್ನಿಯ ಜೊತೆಗೆ ತಂದೆ ಅನೈತಿಕ ಸಂಬಂಧ ಹೊಂದಿರುವ ವಿಚಾರ ಗೊತ್ತಾಗಿದ್ದೇ ತಡ ನರಸರೆಡ್ಡಿ ರೊಚ್ಚಿಗೆದ್ದಿದ್ದು, ತಂದೆಯನ್ನೇ ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದ. ನಾಲ್ವರನ್ನು ಕರೆಸಿ, 2 ಲಕ್ಷ ರೂ. ನೀಡಿ ಕೊಲೆ ಮಾಡುವಂತೆ ಸುಪಾರಿ ಕೊಟ್ಟಿದ್ದ ಎಂದು ತನಿಖೆ ವೇಳೆ ಬಯಲಿಗೆ ಬಂದಿದೆ.

Edited By : Manjunath H D
PublicNext

PublicNext

20/03/2026 10:26 pm

Cinque Terre

10.84 K

Cinque Terre

0