ಮಡಿಕೇರಿ:ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಂಪರ್ಕ ಹೊಂದಿರುವ ಪ್ರತಿ ಮನೆಗೂ ಅಡುಗೆ ಅನಿಲ ಸಿಲಿಂಡರ್ ಅನ್ನು ಪೂರೈಕೆ ಮತ್ತು ಬೇಡಿಕೆಗೆ ತಕ್ಕಂತೆ ಸರ್ಕಾರದ ನಿಯಮಾನುಸಾರ ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಅಡುಗೆ ಅನಿಲ ವಿತರಕರ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ದ ಸಾರಿರುವ ಸಮರ ತೀವ್ರಗೊಂಡಿರುವ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಒಂದು ರೀತಿಯ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಆ ನಿಟ್ಟಿನಲ್ಲಿ ಯಾರೂ ಸಹ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಒಟ್ಟಾರೆ ಗ್ರಾಹಕರಿಗೆ ಗೃಹ ಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ವಿವರಿಸಿದರು.
‘ಅನಧಿಕೃತ ದಾಸ್ತಾನು/ ವಿತರಣೆ/ ಕಾಳಸಂತೆಯಲ್ಲಿ ಮಾರಾಟ ಸೇರಿದಂತೆ ನಿಯಮಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ವಿದ್ಯಾರ್ಥಿ ನಿಲಯ, ವಸತಿ ನಿಲಯಗಳು, ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಇತರೆ ಆದ್ಯತಾ ಸಂಸ್ಥೆಗಳಿಗೆ ಆದ್ಯತಾ ಮೇರೆಗೆ ಅನಿಲ ಸಿಲಿಂಡರ್ ಗಳನ್ನು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.’
Kshetra Samachara
21/03/2026 06:12 am
LOADING...