ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪಲ್ಟಿ - ಎಂಟು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಶುಕ್ರವಾರವಾರ ತಡ ರಾತ್ರಿ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ಸಂಭವಿಸಿದೆ. ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ ಎಂಟು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಚಾಲಕನ ಅತಿಯಾದ ವೇಗ, ನಿಯಂತ್ರಣ ತಪ್ಪಿದ್ದು ಕಾರಣವೇ ಅಥವಾ ಬಸ್ಸಿನ ತಾಂತ್ರಿಕ ದೋಷ ಹಾಗೂ ನಿರ್ವಹಣೆಯ ವೈಫಲ್ಯವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
Kshetra Samachara

Kshetra Samachara

21/03/2026 08:01 am

Cinque Terre

2.7 K

Cinque Terre

0

ಸಂಬಂಧಿತ ಸುದ್ದಿ