ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುರಾತತ್ವ ಇಲಾಖೆ ನಿರ್ಲಕ್ಷ್ಯಕ್ಕೆ ಬೆಲೆ ತೆತ್ತ ಕಲ್ಲು ಮಂಟಪ : ನಂಜನಗೂಡಿನಲ್ಲಿ ತಪ್ಪಿದ ಭಾರೀ ದುರಂತ!

ನಂಜನಗೂಡು: ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ನಂಜನಗೂಡಿನ ಕಲ್ಲು ಮಂಟಪಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದಿದೆ.

ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಕಲ್ಲು ಮಂಟಪದಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದ ಪಾರ್ಕಿಂಗ್ ಸ್ಥಳದಲ್ಲಿರುವ ಕಲ್ಲು ಮಂಟಪದ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವ್ಯಾಪಕವಾಗಿ ಹಬ್ಬಿದೆ.

ಪುರಾತತ್ವ ಇಲಾಖೆಯ ಒಳಪಡುವ ಕಲ್ಲು ಮಂಟಪ ಇದಾಗಿದ್ದು, ನಿರ್ಲಕ್ಷ್ಯಕ್ಕೆ ಒಳಗಾಗಿ ಗಿಡ ಗಂಟೆಗಳು ಬೆಳೆದು ನಿಂತಿವೆ. ಬೇಸಿಗೆ ಪರಿಣಾಮದ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ಮಂಟಪದ ಅಕ್ಕಪಕ್ಕ ಇರುವ ಮನೆಯ ನಿವಾಸಿಗಳು ನೀರು ಎರಚಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.

ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By :
PublicNext

PublicNext

21/03/2026 10:18 am

Cinque Terre

7.69 K

Cinque Terre

0