ತುಮಕೂರು: ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳದಿಂದ ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪಾವಗಡದ ಆಪ್ ಬಂಡೆ ಪ್ರದೇಶದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಯುಗಾದಿ ಸಂಭ್ರಮದ ಶುಕ್ರವಾರದಂದು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಜಂಟಿ ನಿರ್ದೇಶಕ ಕೃಷ್ಣಪ್ಪನ ಕಿರುಕುಳದಿಂದ ಈ ರೀತಿ ಮಾಡಿಕೊಳ್ಳುತ್ತಿದ್ದೇನೆ, ಈತ ತರ್ಲೆ ಇದ್ದಾನೆ. ಈತನ ವಿರುದ್ಧ ನನ್ನ ಕುಟುಂಬ ಹೋರಾಟ ಮಾಡುವುದು ಬೇಡ ದೇವರೇ ಶಿಕ್ಷಿಸುತ್ತಾನೆ ಎಂದು ಹೇಳಿ ತಮ್ಮ ಆಪ್ತರಿಗೆ ವಿಡಿಯೋ ಕಳಿಸಿದ್ದ ಈ ವಿಡಿಯೋ ವೈರಲ್ ಆಗಿದೆ.
ಈ ಹಿಂದೆಯೂ ಸಹ ಮಹಿಳಾ ಹಾಸ್ಟೆಲ್‌ನಲ್ಲಿ ಜಿಲ್ಲಾಧಿಕಾರಿಗಳು, ತಹಶೀಲ್ದಾರರ ಜೊತೆ ಡ್ಯಾನ್ಸ್ ಮಾಡಿ ಜಂಟಿ ನಿರ್ದೇಶಕ ಕೃಷ್ಣಪ್ಪ ವಿವಾದಕ್ಕೆ ಸಿಲುಕಿದ್ದರು. ಈಗ ತಮ್ಮದೇ ಇಲಾಖೆ ಸಿಬ್ಬಂದಿಗೆ ಕಿರುಕುಳ ನೀಡಿ ಆತನ ಸಾವಿಗೆ ಕಾರಣರಾಗಿರುವುದು ಸಾಕಷ್ಟು ಅನುಮಾನಗಳಿಗೂ ಕಾರಣವಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಯಾವರೀತಿ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
PublicNext
21/03/2026 10:29 am
LOADING...