ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಹನುಮನಪುರ ಗ್ರಾಮದ ರೈತ ರವೀಶ್ ಎಂಬುವರು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ. ಬೆಳಗಿನ ಜಾವದ ಸಮಯದಲ್ಲಿ
ಕೊಟ್ಟಿಗೆಯೊಳಗೆ ನುಗ್ಗಿದ ಚಿರತೆಯು ಕರುವಿನ ಮೇಲೆ ಚಿರತೆ ದಾಳಿ ಮಾಡಿ, ಎರಡು ವರ್ಷದ ಕರುವನ್ನು ಎಳೆದಾಡಿ ಅರೆಬರೆ ತಿಂದು ಬಿಸಾಡಿ ಹೋಗಿದೆ. ಮುಂಜಾನೆ ಸಮಯದಲ್ಲಿ ರೈತ ರವೀಂದ್ರ ಹಾಲು ಕರೆಯಲು ಬಂದ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ. ಹನುಮನಪುರ ಗ್ರಾಮದ ಒಳಗೆ ಬಂದು ಚಿರತೆ ದಾಳಿ ನಡೆಸಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಹನುಮನಪುರ, ಕೋಣನೂರು, ಚುಂಚನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಗ್ರಾಮಸ್ಥರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಕೂಡಲೇ ಚಿರತೆಯನ್ನು ಸೆರೆಹಿಡಿದು ನಷ್ಟ ಅನುಭವಿಸಿದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹನುಮನಪುರ ಗ್ರಾಮಸ್ಥರು ಒತ್ತಾಯಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗುವುದು ಮತ್ತು ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
PublicNext
21/03/2026 11:06 am
LOADING...