ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಬೇಲೂರು ಬಳಿ ಭೀಕರ ರಸ್ತೆ ಅಪಘಾತ - ಯುವಕ ಸಾವು, ಇಬ್ಬರಿಗೆ ಗಂಭೀರ ಗಾಯ

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳೆಡಿ ಗ್ರಾಮದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತನನ್ನು ದೀಕ್ಷಿತ್ (29) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ದೀಕ್ಷಿತ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಅನಿಲ್ ಮತ್ತು ರುದ್ರೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ಚಿಕ್ಕಮಗಳೂರಿನಲ್ಲಿ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

21/03/2026 11:09 am

Cinque Terre

400

Cinque Terre

0

ಸಂಬಂಧಿತ ಸುದ್ದಿ