ಗದಗ : ಅಂತರ ಜಿಲ್ಲಾ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಗದಗ ಜಿಲ್ಲೆ ಮುಂಡರಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಸ್ಪಿ ರೋಹನ್ ಜಗದೀಶ್ ಮಾರ್ಗದರ್ಶನ ಮೇರೆಗೆ ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ರವಿ ಕೂಕನೂರನನ್ನು ಬಂಧಿಸಿದ್ದಾರೆ.
ಆರೋಪಿ ರವಿಯಿಂದ 2 ಲಕ್ಷ 5 ಸಾವಿರ ಮೌಲ್ಯದ ಒಟ್ಟು ಬೈಕ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಬೈಕ್ ಕಳ್ಳನನ್ನು ಹಿಡಿದ ಮುಂಡರಗಿ ಠಾಣೆಯ ಸಿಬ್ಬಂದಿಗಳಿಗೆ ಎಸ್ಪಿ ರೋಹನ್ ಜಗದೀಶ್ ಬಹುಮಾನ ಘೋಷಣೆ ಮಾಡಿದ್ದಾರೆ. ಪೊಲೀಸ್ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
21/03/2026 11:18 am
LOADING...