ಶಿವಮೊಗ್ಗ : ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದ ಬಳಸಿರುವ ಗಣಪತಿ ಭಟ್ ಎಂಬುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಗ್ಯಾಸ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಸಂಬಂಧಿಸಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದು, ಇದರ ಬಗ್ಗೆ ಗಣಪತಿ ಭಟ್, ಮೋದಿ ಬಗ್ಗೆ ಪ್ರಶ್ನಿಸಲು ಅರ್ಹತೆ ಇದೆಯೇ ಎನ್ನುವ ಜತೆಗೆ ಅವಾಚ್ಯ ಪದಗಳಿಂದ ನಿಂದಿಸಿರುವುದು ನಾಯಕರ ಗೌರವಕ್ಕೆ ಧಕ್ಕೆಯಾಗಿದೆ. ಸದರಿ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತೀರ್ಥಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಶ್ರೇಯಸ್, ಆದರ್ಶ ಹುಂಚದಕಟ್ಟೆ, ಅಮರನಾಥ ಶೆಟ್ಟಿ, ಕೇಳೂರು ಮಿತ್ರ, ಹೊದಲ ಶಿವು, ರವಿ, ಫಣೀಂದ್ರ, ಜಯರಾಜ್ ಶೆಟ್ಟಿ ಇತರರಿದ್ದರು.
Kshetra Samachara
21/03/2026 11:21 am
LOADING...