ಮೂಡಿಗೆರೆ: ಚಾರ್ಮಾಡಿ ಘಾಟ್‌ನ 9ನೇ ತಿರುವಿನಲ್ಲಿ ಸಂಭವಿಸಿದ ಭೀಕರ ಟಿಟಿ ವಾಹನ ಪಲ್ಟಿ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭದ್ರಾವತಿ ತಾಲ್ಲೂಕಿನ ಮೇಲನಹಳ್ಳಿ ನಿವಾಸಿ ಶೇಖರಪ್ಪ (59) ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬ್ರೇಕ್ ಫೈಲ್ ಆದ ಕಾರಣ ನಿಯಂತ್ರಣ ತಪ್ಪಿದ ವಾಹನದಲ್ಲಿದ್ದ ಒಂದೇ ಕುಟುಂಬದ 13 ಸದಸ್ಯರ ಪೈಕಿ ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಇತರ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಶಿವಮೊಗ್ಗದ ಭದ್ರಾವತಿಯಿಂದ ಪ್ರವಾಸಕ್ಕೆಂದು ತೆರಳುತ್ತಿದ್ದ ಕುಟುಂಬದಲ್ಲಿ ಈ ಸಾವು ಸಂಭವಿಸಿರುವುದು ಮೃತರ ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ.
Kshetra Samachara
21/03/2026 11:39 am
LOADING...