ರಾಯಚೂರು:- ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಆಲಿ ತನ್ನ ಕ್ಷೇತ್ರದಲ್ಲಿ ರೌಂಡ್ಸ್ ಹಾಕಿದ್ದಾರೆ. ಆಲಿ ಕಲ್ಲು ಮಳೆಯಿಂದ ಹಾನಿಗೊಳಗಾದ ಗ್ರಾಮಗಳಾದ ಪರತಪುರ ಕರ್ಕಿಹಳ್ಳಿ, ಕೊಪ್ಪರ ರಾಮನಾಳ ಅರಶಿನಗಿ ಮತ್ತು ಹೂನೂರು ಗ್ರಾಮಗಳಿಗೆ ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಿದ್ದಾರೆ.
ಬೇಸಿಗೆ ಬೆಳೆಗಳಾದ ಭತ್ತ ಸಜ್ಜೆ ಮತ್ತು ಮುಂಗಾರು ಹಂಗಾಮಿನ ಮೆಣಸಿನಕಾಯಿ ಬೆಳೆಗಳು ಕಟಾವು ಹಂತದಲ್ಲಿದ್ದು ಅಬ್ಬರದ ಮಳೆಯಿಂದ ಹಾನಿಗೊಳಗಾಗಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ. ಇದೇ ಕಾರಣಕ್ಕೆ ತಹಶಿಲ್ದಾರ್ ಹಾಗೂ ಕೃಷಿ ಅಧಿಕಾರಿಗಳಿಗೆ ಹಾನಿಗೊಳಗಾದ ಎಲ್ಲಾ ರೈತರ ಸಮೀಕ್ಷೆಯನ್ನು ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕೃಷಿ ಇಲಾಖೆ ಕೃಷಿ ಅಧಿಕಾರಿಗಳು ಜಂಟಿಯಾಗಿ ಮುಗಿಸಿ ಕೂಡಲೇ ಸರಕಾರಕ್ಕೆ ವರದಿಯನ್ನು ಸಲ್ಲಿಸಲು ಸೂಚನೆ ಕೊಟ್ಟಿದ್ದಾರೆ. ರೈತರಿಗೆ ಪರಿಹಾರ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಈ ವೇಳೆ ಸೂಚನೆ ಕೊಟ್ಟಿದ್ದಾರೆ.
PublicNext
21/03/2026 12:11 pm
LOADING...