ಆಂಧ್ರಪ್ರದೇಶದ ಮಚ್ಚಿಲಿಪಟ್ನಂನಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಮಕ್ಕಳೊಂದಿಗೆ ಸಾಗುತ್ತಿದ್ದ ಮಹಿಳೆಯೊಬ್ಬರು ಲಾರಿ ಡಿಕ್ಕಿ ಹೊಡೆದರೂ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೌದು ಮಹಿಳೆಯು ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರೂ ನೆಲಕ್ಕೆ ಬಿದ್ದಿದ್ದಾರೆ. ಈ ಸಂಪೂರ್ಣ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಕ್ಷಣಾರ್ಧದಲ್ಲಿ ಜೀವ ಹಾನಿ ಸಂಭವಿಸಬಹುದು ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ. ವಿಶೇಷವಾಗಿ ರಸ್ತೆ ದಾಟುವಾಗ ಮತ್ತು ದೊಡ್ಡ ವಾಹನಗಳು ಸಮೀಪದಲ್ಲಿ ಸಾಗುತ್ತಿರುವಾಗ ಹೆಚ್ಚಿನ ಎಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಮಕ್ಕಳೊಂದಿಗೆ ಪ್ರಯಾಣಿಸುವಾಗ ಮತ್ತಷ್ಟು ಜಾಗರೂಕರಾಗಿರುವುದು ಅನಿವಾರ್ಯ.
PublicNext
21/03/2026 12:18 pm
LOADING...