ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ

ಶಿವಮೊಗ್ಗ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಒಟ್ಟು 4 ಪೆಟ್ರೋಲ್ ಬಂಕ್‌ಗಳಿವೆ. ಮೂರು ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಖಾಲಿಯಾದ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್‌ನಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಇಂಧನ ಪಡೆದಿದ್ದಾರೆ.

ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಲು ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡು, ಗಂಟೆಗಳ ಕಾಲ ಸಾಲಿನಲ್ಲಿ ನಿಂತು ಇಂಧನ ಪಡೆದುಕೊಂಡರು. ಸಾಮಾನ್ಯವಾಗಿ ಶಾಂತವಾಗಿರುವ ಈ ಪ್ರದೇಶದಲ್ಲಿ ಏಕಾಏಕಿ ಉಂಟಾದ ಈ ದಟ್ಟಣೆ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ.

ಕೆಲವರು ಖಾಲಿ ಬಾಟಲ್‌ಗಳು ಹಾಗೂ ಕ್ಯಾನ್‌ಗಳನ್ನು ತಂದು ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಸಂಗ್ರಹಿಸಿದರು. ಇದರಿಂದ ಇಂಧನ ಕೊರತೆ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

21/03/2026 12:38 pm

Cinque Terre

6.65 K

Cinque Terre

1

ಸಂಬಂಧಿತ ಸುದ್ದಿ